August 2, 2026

ಆಗಸ್ಟ್ 3 ಸೋಮವಾರ ದ.ಕ ಜಿಲ್ಲೆಯ ಈ ಕೆಳಗಿನ ತಾಲೂಕಿನ ಶಾಲಾ ಕಾಲೇಜ್ ಗಳಿಗೆ ರಜೆ ಘೋಷಣೆ

0
image_editor_output_image-866243089-1785689173910

ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಸ್ಟ್ 3 (ಸೋಮವಾರ)ರಂದು ಜಿಲ್ಲೆಯ ವಿವಿಧ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಮಂಗಳೂರು ಉಪವಿಭಾಗದ ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ಹಾಗೂ ಉಳ್ಳಾಲ ತಾಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (10ನೇ ತರಗತಿವರೆಗೆ), ವಸತಿ ಶಾಲೆಗಳು ಸೇರಿ ರಜೆ ಘೋಷಿಸಲಾಗಿದೆ.ಪುತ್ತೂರು ಉಪವಿಭಾಗದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಎಲ್ಲಾ ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ (12ನೇ ತರಗತಿವರೆಗೆ), ವಸತಿ ಶಾಲೆ-ಕಾಲೇಜುಗಳು ಸೇರಿ ರಜೆ ಅನ್ವಯವಾಗಲಿದೆ.ಜಿಲ್ಲಾಧಿಕಾರಿಗಳು ಸಾರ್ವಜನಿಕರು ಹಾಗೂ ಪ್ರವಾಸಿಗರು ನದಿ, ಸಮುದ್ರ ತೀರ ಮತ್ತು ನೀರು ತುಂಬಿರುವ ತಗ್ಗು ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಿದ್ದಾರೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿದ್ದು ವಿಪತ್ತು ನಿರ್ವಹಣಾ ಕಾರ್ಯದಲ್ಲಿ ಸನ್ನದ್ಧರಾಗಿರಬೇಕು ಎಂದು ಆದೇಶಿಸಲಾಗಿದೆ.ಯಾವುದೇ ತುರ್ತು ಪರಿಸ್ಥಿತಿಯಲ್ಲಿ ಸಾರ್ವಜನಿಕರು 1077 (ಟೋಲ್ ಫ್ರೀ) ಅಥವಾ 0824-2442590 ಸಂಖ್ಯೆಗೆ ಸಂಪರ್ಕಿಸಲು ಜಿಲ್ಲಾಡಳಿತ ಮನವಿ

Leave a Reply

Your email address will not be published. Required fields are marked *

error: Content is protected !!