August 3, 2026

ಬಂಟ್ವಾಳ: ನಾಪತ್ತೆಯಾಗಿದ್ದ ಜೀವನ್ ಪಿಂಟೋ ಮೃತದೇಹ ಪತ್ತೆ: NDRF ನಿರಂತರ ಕಾರ್ಯಾಚರಣೆ ಬಳಿಕ ಪಂಬದಗದ್ದೆ ಎಂಬಲ್ಲಿ ಪತ್ತೆ

0
image_editor_output_image-1479509163-1785734881031

ಬಂಟ್ವಾಳ: ಕೊಯಿಲ ಸಮೀಪದ ಹೋರಂಗಳದಲ್ಲಿ ಶನಿವಾರ ರಾತ್ರಿ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ನಾಪತ್ತೆಯಾಗಿದ್ದ ಜೀವನ್ ಪಿಂಟೋ ಅವರ ಮೃತದೇಹ ಸೋಮವಾರ ಬೆಳಿಗ್ಗೆ ಪತ್ತೆಯಾಗಿದೆ.

ಶನಿವಾರ ರಾತ್ರಿ ಸಂಭವಿಸಿದ ಘಟನೆಯ ಬಳಿಕ ಸ್ಥಳೀಯರು, ಅಗ್ನಿಶಾಮಕ ದಳ ಹಾಗೂ ಎನ್‌ಡಿಆರ್‌ಎಫ್ (NDRF) ತಂಡಗಳು ನಿರಂತರವಾಗಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಮಳೆ ಹಾಗೂ ನೀರಿನ ಹರಿವು ಹೆಚ್ಚಿದ್ದ ಕಾರಣ ಕಾರ್ಯಾಚರಣೆಗೆ ಅಡಚಣೆ ಉಂಟಾಗಿದ್ದರೂ ಶೋಧ ಮುಂದುವರಿಸಲಾಗಿತ್ತು.

ಸೋಮವಾರ ಬೆಳಿಗ್ಗೆ ಅರಳ ಗ್ರಾಮದ ಪಂಬದಗದ್ದೆ ಸಮೀಪದ ನೀರಿನಲ್ಲಿ ಜೀವನ್ ಪಿಂಟೋ ಅವರ ಮೃತದೇಹ ಪತ್ತೆಯಾಗಿದೆ ಎಂದು ಎನ್‌ಡಿಆರ್‌ಎಫ್ ತಂಡ ಮಾಹಿತಿ ನೀಡಿದೆ.

ಮೃತದೇಹವನ್ನು ಮೇಲಕ್ಕೆತ್ತಿ ಮುಂದಿನ ಕಾನೂನು ಪ್ರಕ್ರಿಯೆಗಾಗಿ ಸಂಬಂಧಿತ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದೆ. ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಮಳೆಗಾಲದಲ್ಲಿ ನದಿ, ಹೊಳೆ ಹಾಗೂ ತೋಡುಗಳ ನೀರಿನ ಹರಿವು ಹೆಚ್ಚಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!