ಇಂದು ಸಂಜೆ ನೂತನ ಸಚಿವರ ಪ್ರಮಾಣ ವಚನ: ಕರ್ನಾಟಕದ 20 ಮಂದಿ ಸಚಿವರಾಗಿ ಇಂದು ಪ್ರಮಾಣವಚನ ಸ್ವೀಕಾರ
ಬೆಂಗಳೂರು: ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ಸಂಜೆ ನಡೆಯಲಿದೆ ಎಂದು ಲೋಕಭವನ ಮಾಹಿತಿ ನೀಡಿದೆ.
ಲೋಕಭವನದ ಗಾಜಿನ ಮನೆಯಲ್ಲಿ ಸಮಾರಂಭ ನಡೆಯಲಿದ್ದು, ಇದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಹೊರಭಾಗದಲ್ಲಿ ಜರ್ಮನ್ ಟೆಂಟ್ ಅಳವಡಿಸಲಾಗಿದ್ದು, ಲೋಕೋಪಯೋಗಿ ಇಲಾಖೆಯ ಮೂಲಕ ಮೂರು ದಿನಗಳ ಹಿಂದೆಯೇ ಸಿದ್ಧತಾ ಕಾರ್ಯಗಳನ್ನು ಪೂರ್ಣಗೊಳಿಸಲಾಗಿದೆ.
ಸಮಾರಂಭದ ಭದ್ರತಾ ದೃಷ್ಟಿಯಿಂದ ಎರಡು ಸಾವಿರ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
ಇಂದು ಪ್ರಮಾಣವಚನ ಸ್ವೀಕರಿಸಲಿರುವ ನೂತನ ಸಚಿವರ ಪಟ್ಟಿ:
ಪಿ.ಎಂ. ನರೇಂದ್ರಸ್ವಾಮಿ
ಶಿವರಾಜ್ ತಂಗಡಗಿ
ರುದ್ರಪ್ಪ ಲಮಾಣಿ
ಕೆ.ಎಸ್. ಬಸವಂತಪ್ಪ
ಬಿ. ನಾಗೇಂದ್ರ
ಟಿ. ರಘುಮೂರ್ತಿ
ಜಮೀರ್ ಅಹ್ಮದ್ ಖಾನ್
ರಿಜ್ವಾನ್ ಅರ್ಷದ್
ಸಂತೋಷ್ ಲಾಡ್
ಮಧು ಬಂಗಾರಪ್ಪ
ಸಿ. ಪುಟ್ಟರಂಗಶೆಟ್ಟಿ
ಮಂಕಾಳ ವೈದ್ಯ
ಅಜಯ್ ಸಿಂಗ್
ಎನ್. ಚಲುವರಾಯಸ್ವಾಮಿ
ಕೆ.ಎಂ. ಶಿವಲಿಂಗೇಗೌಡ
ಹೆಚ್.ಸಿ. ಬಾಲಕೃಷ್ಣ
ಗಾಯಿತ್ರಿ ಶಾಂತೇಗೌಡ
ಬಸವರಾಜ ರಾಯರೆಡ್ಡಿ
ವಿಜಯಾನಂದ ಕಾಶಪ್ಪನವರ್
ಲಕ್ಷ್ಮಣ್ ಸವದಿ
ಸಂಪುಟ ವಿಸ್ತರಣೆಯೊಂದಿಗೆ ರಾಜ್ಯ ರಾಜಕಾರಣದಲ್ಲಿ ನೂತನ ಅಧ್ಯಾಯ ಆರಂಭವಾಗಲಿದ್ದು, ನೂತನ ಸಚಿವರಿಗೆ ಶೀಘ್ರದಲ್ಲೇ ಖಾತೆಗಳ ಹಂಚಿಕೆಯಾಗುವ ಸಾಧ್ಯತೆಯಿದೆ.




