ಶಾಲಾ ಮಕ್ಕಳ ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್ ಗಿರಿ ಹೆಸರು ಬದಲಿಸಲು ಸೂಚನೆ
ಚಿಕ್ಕಮಗಳೂರು: ಶಾಲಾ ಮಕ್ಕಳ ಪಠ್ಯಪುಸ್ತಕಗಳಲ್ಲಿ ಇರುವ ಬಾಬಾಬುಡನ್ ಗಿರಿ ಹೆಸರಿನ ಬದಲು ಸರ್ಕಾರಿ ದಾಖಲೆಗಳಲ್ಲಿ ಇರುವಂತೆಯೇ ಉಲ್ಲೇಖಿಸಲು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.
ಸರ್ಕಾರದ ಅಧಿಕೃತ ದಾಖಲೆಗಳಲ್ಲಿ ಇರುವಂತೆಯೇ ಪಠ್ಯಪುಸ್ತಕಗಳಲ್ಲಿಯೂ ಇರಬೇಕು ಎಂದು ಸಚಿವರು ನಿರ್ದೇಶನ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಬಾಬಾಬುಡನ್ ಗಿರಿ ಬದಲು ಇನಾಮ್ ದತ್ತಾತ್ರೇಯ ಪೀಠ ಎಂದು ಮುದ್ರಿಸಲು ಶಿಕ್ಷಣ ಇಲಾಖೆ ಕಾರ್ಯದರ್ಶಿಗೆ ಸೂಚಿಸಲಾಗಿದೆ. ರಾಜ್ಯದ 4, 6 ಮತ್ತು 9ನೇ ತರಗತಿಯ ಪಠ್ಯಪುಸ್ತಕಗಳಲ್ಲಿ ಬಾಬಾಬುಡನ್ಗಿರಿ ಎಂಬ ಹೆಸರಿದೆ. ಅದನ್ನು ಬದಲಿಸಿ ಸರ್ಕಾರಿ ದಾಖಲೆಗಳಲ್ಲಿ ಇರುವ ಹೆಸರು ನಮೂದಿಸುವಂತೆ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ.ಪ್ರಾಣೇಶ್ ಇತ್ತೀಚೆಗೆ ಆಗ್ರಹಿಸಿದ್ದರು. ಬಾಬಾ ಬುಡನ್ ಗಿರಿಯ ಹೆಸರು ” ಶ್ರೀ ಗುರು ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ” ಎಂದು ಸರ್ಕಾರಿ ದಾಖಲೆಗಳಲ್ಲಿ ದಾಖಲಾಗಿದೆ.