ಬೆಳ್ತಂಗಡಿ: ಪ್ರತಿಭಟನೆ ವೇಳೆ ದ್ವೇಷ ಭಾಷಣ ಮಾಡಿದ ಪ್ರಕರಣ: ರಿಯಾಝ್ ಫರಂಗಿಪೇಟೆ ಗೆ 6 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದ ನ್ಯಾಯಾಲಯ
ಬೆಳ್ತಂಗಡಿ: ದಿನಾಂಕ: 23-07-2015 ರಂದು ಬೆಳ್ತಂಗಡಿ ತಾಲೂಕು ಕಛೇರಿ ಬಳಿ, ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ ಬೆಳ್ತಂಗಡಿ ವಲಯ ಎಂಬ ಸಂಘಟನೆಯ ವತಿಯಿಂದ ನಡೆಯುತ್ತಿದ್ದ ಪ್ರತಿಭಟನಾ ಸಭೆಯಲ್ಲಿ, ಧಾರ್ಮಿಕ ಭಾವನೆಗೆ ಧಕ್ಕೆಯಾಗುವಂತೆ ಪ್ರಚೋದನಾಕಾರಿಯಾಗಿ ಭಾಷಣ ಮಾಡಿದ ಹಿನ್ನೆಲೆಯಲ್ಲಿ, ಮಹಮ್ಮದ್ ರಿಯಾಜ್ ಫರಂಗಿಪೇಟೆ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 315/2015, ಕಲಂ: 153(A)295(A) ಭಾ.ದಂ.ಸಂ (IPC)ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ಬೆಳ್ತಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರು ಹಾಗೂ ಸದ್ರಿ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆಹಾಕಿ ಮಾನ್ಯ ನ್ಯಾಯಾಲಯಕ್ಕೆ ದೊಷಾರೊಪಣಾ ಪಟ್ಟಿ ಸಲ್ಲಿಸಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ನಡೆದು, ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶರಾದ ರಾಮಲಿಂಗಪ್ಪರವರು
ಕಲಂ : 153(A) ಅಡಿಯಲ್ಲಿ 6 ತಿಂಗಳ ಸಾದಾ ಕಾರಗೃಹ ವಾಸ ಮತ್ತು 10,000 ದಂಡ ವಿಧಿಸಿ ಅದೇಶಿಸಿರುತ್ತಾರೆ.
ಸರಕಾರಿ ಅಭಿಯೋಜಕರಾದ ಶ್ರೀಮತಿ ಆಶೀತರವರು ಸಮರ್ಥವಾಗಿ ವಾದಮಂಡನೆ ನಡೆಸಿರುತ್ತಾರೆ.




