ಖ್ಯಾತ ಖಳ ನಟ ಪ್ರದೀಪ್ ಸಿಂಗ್ ರಾವತ್ ನಿಧನ
ಮುಂಬೈ: ಹಿಂದಿಯ ‘ಗಜನಿ’ ಸೇರಿದಂತೆ ಹಲವು ಚಿತ್ರಗಳಲ್ಲಿ ಖಳನಾಯಕನ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಹಿರಿಯ ನಟ ಪ್ರದೀಪ್ ಸಿಂಗ್ ರಾವತ್ ಅವರು ಮಂಗಳವಾರ ನಿಧನರಾದರು. ಅವರಿಗೆ 74 ವರ್ಷ ವಯಸ್ಸಾಗಿತ್ತು.
ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿದ್ದ ರಾವತ್ ಅವರು ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ ಅವರು ಮೃತಪಟ್ಟರು ಎಂದು ನಟಿ ವಿಪನಾ ಥಾಪಾ ತಿಳಿಸಿದ್ದಾರೆ.
ರಾವತ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ನಟಿ ವಿಪನಾ ಥಾಪಾ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತೀಯ ಚಿತ್ರರಂಗದ ಹಲವು ಕಲಾವಿದರು ಕೂಡ ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.




