September 22, 2026

ಸುರತ್ಕಲ್: ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು SSLC ವಿದ್ಯಾರ್ಥಿ ಮೃತ್ಯು

0
image_editor_output_image848963382-1785994129674

ಸುರತ್ಕಲ್: ಆಟದ ಮೈದಾನದಲ್ಲಿ ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ 15 ವರ್ಷದ ಬಾಲಕನೊಬ್ಬ ಆಟದ ಮಧ್ಯೆಯೇ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಬುಧವಾರ (ಆಗಸ್ಟ್ 5) ನಡೆದಿದೆ.

ಸೂರಿಂಜೆ ನಿವಾಸಿ ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತಪಟ್ಟ ದುರ್ದೈವಿ. ಈತ ಸೂರಿಂಜೆ ಕೋಟೆ ಬೋಳ್ಳಾರು ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು.

 

ಬುಧವಾರ ಸಂಜೆ ಲಿಖಿತ್ ತನ್ನ ಗೆಳೆಯರೊಂದಿಗೆ ಸೂರಿಂಜೆ ಮೈದಾನದಲ್ಲಿ ವಾಲಿಬಾಲ್ ಆಡುತ್ತಿದ್ದನು. ಆಟದ ನಡುವೆಯೇ ಆತ ಹಠಾತ್ತಾಗಿ ಕುಸಿದು ಬಿದ್ದಿದ್ದಾನೆ. ಗಾಬರಿಗೊಂಡ ಸ್ನೇಹಿತರು ಮತ್ತು ಸ್ಥಳೀಯರು ತಕ್ಷಣವೇ ಆತನನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಲಿಖಿತ್ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಶಾಲೆಯಲ್ಲಿ ಎಲ್ಲರೊಂದಿಗೆ ಬೆರೆಯುತ್ತಿದ್ದ ಪ್ರತಿಭಾವಂತ ವಿದ್ಯಾರ್ಥಿಯ ಅಕಾಲಿಕ ನಿಧನವು ಸೂರಿಂಜೆ ಗ್ರಾಮ ಮತ್ತು ಶಾಲೆಯಲ್ಲಿ ಶೋಕದ ಛಾಯೆ ಆವರಿಸುವಂತೆ ಮಾಡಿದೆ. ಹದಿಹರೆಯದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Leave a Reply

Your email address will not be published. Required fields are marked *

You may have missed

error: Content is protected !!