September 22, 2026

ಚಿಕ್ಕಮಗಳೂರು: ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರಿಗೆ ಎಚ್ಚರಿಕೆ: ಬೈಕ್ ಸವಾರನ ಮೇಲೆ ಮರ ಬಿದ್ದು ಕೂದಲೆಳೆ ಅಂತರದಲ್ಲಿ ಪಾರು

0
image_editor_output_image150453391-1786010887169

ಚಿಕ್ಕಮಗಳೂರು: ಮಳೆ ಪ್ರಮಾಣ ಕಡಿಮೆಯಾಗಿದ್ದರೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಅವಾಂತರಗಳು ಮುಂದುವರಿದಿದ್ದು, ಮುಳ್ಳಯ್ಯನಗಿರಿ-ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

ಚಿಕ್ಕಮಗಳೂರು ತಾಲೂಕಿನ ಚನ್ನಗೋಡನಹಳ್ಳಿ ಸಮೀಪ ಮುಳ್ಳಯ್ಯನಗಿರಿ ಮಾರ್ಗದಲ್ಲಿ ಭಾರೀ ಗಾಳಿಗೆ ಮರ ಬುಡಸಮೇತ ಉರುಳಿ ಪ್ರವಾಸಿ ಬೈಕ್ ಮೇಲೆ ಬಿದ್ದಿದೆ. ಮರದ ತುದಿ ಭಾಗ ಮಾತ್ರ ಬೈಕ್‌ಗೆ ತಗುಲಿದ್ದರಿಂದ ಸವಾರ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

 

ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭೂಮಿಯ ತೇವಾಂಶ ಇನ್ನೂ ಹೆಚ್ಚಿರುವುದರಿಂದ ಹಲವೆಡೆ ಮಣ್ಣು ಕುಸಿಯುವ ಘಟನೆಗಳು ವರದಿಯಾಗುತ್ತಿವೆ. ಮುಳ್ಳಯ್ಯನಗಿರಿ-ದತ್ತಪೀಠ ಮಾರ್ಗದಲ್ಲೂ ಅಲ್ಲಲ್ಲಿ ಭೂ ಕುಸಿತ ಸಂಭವಿಸಿದ್ದು, ರಸ್ತೆ ಸಂಚಾರದಲ್ಲಿ ಅಪಾಯದ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಮತ್ತು ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

Leave a Reply

Your email address will not be published. Required fields are marked *

You may have missed

error: Content is protected !!