September 14, 2026

ಬಿ.ಸಿ ರೋಡ್ ನಲ್ಲಿ ನಡೆದ ಭೀಕರ ಅಪಘಾತ ಪ್ರಕರಣ: ಗಂಭೀರ ಗಾಯಗೊಂಡಿದ್ದ ಓರ್ವ ಮೃತ್ಯು

0
image_editor_output_image-820185308-1786030322802

ಬಿ.ಸಿ. ರೋಡ್: ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್ ಸರ್ಕಲ್ ಬಳಿ ಟಿಪ್ಪರ್ ಲಾರಿ ಹಾಗೂ ಆಕ್ಟಿವಾ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸಾವನ್ನಪ್ಪಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ.

ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ಸಾಗಿಸುತ್ತಿದ್ದ ಸಂದರ್ಭ ಚಿಂತಾಜನಕ ಸ್ಥಿತಿಯಲ್ಲಿದ್ದ ಗಾಯಾಳು ಯಶವಂತ್ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ.

ಪಾಣೆಮಂಗಳೂರು ಹೊರವಲಯದ ಮರ್ದೋಳಿ ನಿವಾಸಿಗಳಾದ ಯಶವಂತ್ ಮತ್ತು ದಯಾನಂದ ಆಕ್ಟೀವಾದಲ್ಲಿ ಪ್ರಯಾಣಿಸುತ್ತಿದ್ದು ಅಪಘಾತದಲ್ಲಿ ಗಂಭೀರ ಗಾಯಗೊಂಡ ಯಶವಂತ್ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ದಯಾನಂದ ಕೂಡಾ ಗಂಭೀರ ಗಾಯಗೊಂಡು ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!