15-18 ವಯಸ್ಸಿನವರಿಗೆ ಲಸಿಕೆ:
ಇಂದಿನಿಂದ ಕೋವಿನ್ ಆ್ಯಪ್ ನಲ್ಲಿ ನೋಂದಣಿ ಪ್ರಾರಂಭ
ನವದೆಹಲಿ: ದೇಶದಲ್ಲಿ 15-18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು.

ಅದರಂತೆ ಕೋವಿನ್ ಆ್ಯಪ್‌ನಲ್ಲಿ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಇಂದಿನಿಂದ ನೋಂದಣಿ ಪ್ರಕ್ರಿಯೆ ಆರಂಭವಾಗಲಿದ್ದು, ಜನವರಿ 3ರಿಂದ ಲಸಿಕೆ ವಿತರಣೆ ಕಾರ್ಯ ನಡೆಯಲಿದೆ ಎಂದು ಮಾಹಿತಿ ಹಂಚಿಕೊಂಡಿದೆ. 15-18 ವಯಸ್ಸಿನವರಿಗೆ ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ಮಾತ್ರ ನೀಡಲಾಗುವುದು ಮತ್ತು ಹೆಚ್ಚುವರಿ ಡೋಸ್ ‘ಕೋವಾಕ್ಸಿನ್’ ಅನ್ನು ಎಲ್ಲಾ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಕಳುಹಿಸಲಾಗುವುದು ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ಜೊತೆಗೆ ಕೇವಲ ನಿಗದಿತ ವಯೋಮಾನದವರಿಗಾಗಿ ಲಸಿಕಾ ಕೇಂದ್ರಗಳ ತೆರೆಯಲು ರಾಜ್ಯಗಳಿಗೆ ಅಧಿಕಾರ ನೀಡಲಾಗಿದೆ.





