August 7, 2026

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image588236367-1786066279533

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ ಯುವತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಮಾಡಿಯಲ್ಲಿ ಗುರುವಾರ ನಡೆದಿದೆ.

ಮೃತರನ್ನು ಕಲ್ಮಾಡಿ ನಿವಾಸಿ ರತ್ನಾ ಅವರ ಪುತ್ರಿ ಕೃತಿ ಬಂಗೇರಾ (27) ಎಂದು ಗುರುತಿಸಲಾಗಿದೆ.

ಕೃತಿ ಮಾಡೆಲಿಂಗ್ ಕ್ಷೇತ್ರದಲ್ಲಿ ಹೆಸರು ಮಾಡಿದ್ದು, ನಗರದ ಕಡಿಯಾಳಿ ಸಮೀಪದ ಖಾಸಗಿ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ಸುಮಾರು ಐದು ತಿಂಗಳಿಂದ ಅವರು ಕೆಲಸಕ್ಕೆ ಹೋಗದೆ ಮನೆಯಲ್ಲೇ ಇದ್ದರು ಎಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಅವರು ಮಾನಸಿಕ ಒತ್ತಡದಿಂದ ಬಳಲುತ್ತಿದ್ದು, ಕಲ್ಮಾಡಿಯಲ್ಲಿರುವ ತಮ್ಮ ನಿವಾಸದ ಬೆಡ್‌ರೂಮ್‌ನಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!