August 7, 2026

ಪಡುಬಿದ್ರಿ: ಮುದರಂಗಡಿ ಗ್ರಾ.ಪಂ ಮಾಜಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ

0
image_editor_output_image-1765302537-1786102268054

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ, ಗುತ್ತಿಗೆದಾರ ಡೇವಿಡ್ ಡಿಸೋಜ ದುಷ್ಕಮಿಗಳ ಗುಂಡಿಗೆ ಬಲಿಯಾಗಿರುವ ಬಗ್ಗೆ ವರದಿಯಾಗಿದೆ.

ಇಂದು ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್‌ ಅವರಿಗೆ ಗುಂಡಿಕ್ಕಿ ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!