August 8, 2026

ಉಡುಪಿ: ಕಾಂಗ್ರೆಸ್ ಮುಖಂಡ ಡೇವಿಡ್ ಡಿ ಸೋಜಾ ಹತ್ಯೆ ಆರೋಪಿ ಕಾಲಿಗೆ  ಪೊಲೀಸರಿಂದ ಫೈರಿಂಗ್

0
image_editor_output_image2086709724-1786158929129

ಉಡುಪಿ: ಕಾಂಗ್ರೆಸ್‌ ಮುಖಂಡ ಡೇವಿಡ್‌ ಡಿಸೋಜಾ ಕೊಲೆ ಪ್ರಕರಣದ ಪ್ರಮುಖ ಆರೋಪಿ ಕಾಲಿಗೆ ಪೊಲೀಸರು ಗುಂಡೇಟು ನೀಡಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ಯುಪಿ ಮೂಲದ ಶೂಟರ್‌ ರಾಜು ಬಲಗಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ. ಬೈಂದೂರು ಒತ್ತಿನಣೆ ಪ್ರದೇಶದಲ್ಲಿ ಘಟನೆ ನಡೆದಿದೆ.

ಮೂವರು ಆರೋಪಿಗಳು ಬೈಂದೂರಿನ ಒತ್ತಿನಣೆಯಲ್ಲಿ ಅಡಗಿರುವ ಕುರಿತು ಎಸ್‌ಐ ತೇಜಸ್ವಿ ಹಾಗೂ ಪ್ರಸನ್ನ ಅವರ ನೇತೃತ್ವದ ತಂಡ ಸ್ಥಳಕ್ಕೆ ಧಾವಿಸಿತ್ತು. ಈ ವೇಳೆ ಪೊಲೀಸರ ಮೇಲೆ ಆರೋಪಿಗಳು ದಾಳಿ ನಡೆಸಿದ್ದು ಆತ್ಮರಕ್ಷಣೆಗಾಗಿ ಪೊಲೀಸರು ಗುಂಡು ಹಾರಿಸಿದ್ದಾರೆ. ಪೊಲೀಸರಿಗೂ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!