ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗು ಮೃತ್ಯು
ಕುಶಾಲನಗರ: ಶಾಲಾ ಕಾಂಪೌಂಡ್ ನಿಂದ ಗೇಟ್ ಕಳಚಿ ಬಿದ್ದು ಮಗುವೊಂದು ಸಾವನ್ನಪ್ಪಿದ ಘಟನೆ ಕುಶಾಲನಗರ ಸಮೀಪದ ಬಸವನಹಳ್ಳಿ ಹಾಡಿಯಲ್ಲಿ ನಡೆದಿದೆ.
ಬಸವನಹಳ್ಳಿ ಹಾಡಿಯ ಸತೀಶ ಮತ್ತು ಪವಿತ್ರ ದಂಪತಿಯ ಪುತ್ರಿ ಅಪೂರ್ವ (4) ಮೃತ ಮಗು.
ಶುಕ್ರವಾರ ಸಂಜೆ ವೇಳೆ ಗೇಟ್ ಬಳಿ ಬಂದಾಗ ಶಿಥಿಲವಾಗಿದ್ದ ಕಾಂಪೌಂಡ್ ನಿಂದ ಬೃಹತ್ ಕಬ್ಬಿಣದ ಗೇಟ್ ಗೋಡೆ ಸಹಿತ ಕಳಚಿ ಬಿದ್ದು ಮಗುವಿನ ತಲೆ ಮೇಲೆ ಬಿದ್ದು ತೀವ್ರ ಗಾಯಗೊಂಡ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಕುಟುಂಬ ಸದಸ್ಯರು ತಿಳಿಸಿದ್ದಾರೆ.




