August 10, 2026

ಮಂಗಳೂರು: ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ: ಇಬ್ಬರ ಬಂಧನ

0
IMG-20260810-WA0139

ಮಂಗಳೂರು: ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕರಿಗೆ ಬೆದರಿಕೆ ಹಾಕುತ್ತಾ ತಡರಾತ್ರಿ ಸಂಚರಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಉಳ್ಳಾಲದ ಮಾರ್ಗತಲೆ ನಿವಾಸಿ ಮೊಹಮ್ಮದ್ ಶಾಕಿರ್ ( 31) ಹಾಗೂ ಮಂಚಿಲ ನಿವಾಸಿ, ಅಶ್ಪಕ್ (28) ಬಂಧಿತರು.

ಬಂಧಿತರ ಪೈಕಿ ಶಾಕಿರ್ ವೆಲ್ಡಿಂಗ್ ಕೆಲಸ ಮಾಡಿಕೊಂಡಿದ್ದರೆ, ಅಶ್ಪಕ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ಈತನ ವಿರುದ್ಧ ಈಗಾಗಲೇ ರೌಡಿ ಶೀಟ್ ತೆರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಶನಿವಾರ ತಡರಾತ್ರಿ ಸುಮಾರು 12.15ರ ಸುಮಾರಿಗೆ ಈ‌ ಇಬ್ಬರು ತೊಕ್ಕೊಟ್ಟಿನಲ್ಲಿ ಬಾರ್‌ ಒಂದರ ಬಳಿ ಮದ್ಯದ ಅಮಲಿನಲ್ಲಿ ತಲವಾರು ಹಿಡಿದು ಸಾರ್ವಜನಿಕವಾಗಿ ಓಡಾಡಿ, ಜನರಿಗೆ ಬೆದರಿಕೆ ಹಾಕುತ್ತಿದ್ದರು.

ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ತಲವಾರು ಬಳಕೆ ಹಾಗೂ ಸಾರ್ವಜನಿಕರಿಗೆ ಬೆದರಿಕೆ ಹಾಕಿದ ಆರೋಪದಡಿ ಶಸ್ತ್ರಾಸ್ತ್ರ ಕಾಯ್ದೆ ಸೇರಿದಂತೆ ಸಂಬಂಧಿತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!