August 10, 2026

ವಿಟ್ಲ: ಗಾಂಜಾ ಸೇವನೆ: ನಾಲ್ವರು ಆರೋಪಿಗಳ ಬಂಧನ

0
IMG-20220615-WA0046

ವಿಟ್ಲ: ಬಂಟ್ವಾಳ ತಾಲೂಕಿನ ವಿಟ್ಲ ಕಸಬಾ ಗ್ರಾಮದ ಕಾನತ್ತಡ್ಕದಲ್ಲಿ ಅನುಮಾನಾಸ್ಪದವಾಗಿ ಕಾರೊಂದು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆ.9ರಂದು ಸಂಜೆ ಕಾನತ್ತಡ್ಕದಲ್ಲಿ ಅನುಮಾನಾಸ್ಪದ ಕಾರೊಂದು ಇರುವ ಬಗ್ಗೆ ವಿಟ್ಲ ಠಾಣೆಯ ಪೊಲೀಸ್ ಉಪನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ನಾಗರಾಜ ಕೆ. (32) ಎಂಬವರ ಮನೆಯ ಅಂಗಳದಲ್ಲಿ KA-17-N-7443 ನೋಂದಣಿ ಸಂಖ್ಯೆಯ ಕಾರು ಪತ್ತೆಯಾಗಿದೆ.

ಈ ವೇಳೆ ಮನೆಯ ಜಗಲಿಯಲ್ಲಿ ನಾಲ್ವರು ವ್ಯಕ್ತಿಗಳು ಕುಳಿತಿರುವುದು ಕಂಡುಬಂದಿದ್ದು, ವಿಚಾರಣೆ ನಡೆಸಿದಾಗ ಅವರು ಮನೆಯ ಮಾಲೀಕ ನಾಗರಾಜ ಕೆ., ಕೊಳ್ನಾಡು ನಿವಾಸಿ ಕುಮಾರ್ ಕೃಷ್ಣ (27), ಕೇಪು ನಿವಾಸಿ ಅಬ್ದುಲ್ ಜಲೀಲ್ (40) ಹಾಗೂ ವಿಟ್ಲ ಕಸಬಾ ನಿವಾಸಿ ಅಬ್ದುಲ್ ಖಾದರ್ ಯು. (31) ಎಂದು ತಿಳಿದುಬಂದಿದೆ.

ಪೊಲೀಸರ ವಿಚಾರಣೆಯಲ್ಲಿ ನಾಲ್ವರೂ ಕಾರಿನಲ್ಲಿ ಗಾಂಜಾ ತಂದು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಬಳಿಕ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 173/2026, ಎನ್‌ಡಿಪಿಎಸ್ ಕಾಯ್ದೆ, 1985ರ ಕಲಂ 27(b) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!