August 11, 2026

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ – ಬೈಕ್ ನಡುವೆ ಅಪಘಾತ: ಸವಾರ ಮೃತ್ಯು, ಸಹ ಸವಾರ ಗಂಭೀರ

0
IMG-20260811-WA0038

ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಆ11 ರಂದು ಬೆಳಗ್ಗೆ ನಡೆದಿದೆ.

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಎದುರಿನಿಂದ ಬರುತ್ತಿದ್ದ ಬೈಕ್ ಮುಖಾಮುಖಿ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಜಖಂಗೊಂಡಿದ್ದು, ಬೈಕ್ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಮಡಂತ್ಯಾರು, ಪಾರೆಂಕಿ ಪಂಗಳ ನಿವಾಸಿ ಸೋಮನಾಥ (27) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಬೈಕ್‌ನಲ್ಲಿ ಸಹಸವಾರ ಭರತ್ ಬಳ್ಳಮಂಜ ಇವರು ಗಂಭೀರವಾಗಿ ಗಾಯಗೊಂಡಿದ್ದು, ಉಜಿರೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಿಬ್ಬರೂ ಗಾರೆ ಕೆಲಸದವರಾಗಿದ್ದು ಧರ್ಮಸ್ಥಳಕ್ಕೆ ಕೆಲಸಕ್ಕೆಂದು ತೆರಳುತ್ತಿದ್ದ ವೇಳೆ ನೀರಚಿಲುಮೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Leave a Reply

Your email address will not be published. Required fields are marked *

error: Content is protected !!