ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ನಡೆಯಲಿರುವ ವಾಹನ ಜಾಥಾಕ್ಕೆ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದಿಲ್ಲ: ಉಲ್ಲಂಘಿಸಿದರೆ ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ: ಪೊಲೀಸ್ ಇಲಾಖೆ ಸ್ಪಷ್ಟನೆ
ಕಲ್ಲಡ್ಕ: ಕಲ್ಲಡ್ಕದಲ್ಲಿ ಆಗಸ್ಟ್ 13ರಂದು ವಾಹನ ಜಾಥಾ ಕಾರ್ಯಕ್ರಮ ನಡೆಯಲಿದೆ ಎಂಬ ಪೋಸ್ಟರ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಪೊಲೀಸ್ ಇಲಾಖೆಯಿಂದ ಯಾವುದೇ ಪೂರ್ವಾನುಮತಿ ಪಡೆಯಲಾಗಿಲ್ಲ ಎಂದು ಪೊಲೀಸ್ ಇಲಾಖೆ ಸ್ಪಷ್ಟಪಡಿಸಿದೆ.
ಪೂರ್ವಾನುಮತಿ ಪಡೆಯದೇ ಸಾರ್ವಜನಿಕರ ಹಾಗೂ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುವ ರೀತಿಯಲ್ಲಿ ವಾಹನ ಜಾಥಾ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ಆಯೋಜಿಸಿದರೆ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ಸಾರ್ವಜನಿಕರು ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮುನ್ನ, ಆ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಇಲಾಖೆಯಿಂದ ಅಗತ್ಯ ಪೂರ್ವಾನುಮತಿ ಪಡೆಯಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಅನುಮತಿ ಇಲ್ಲದ ಕಾರ್ಯಕ್ರಮಗಳಲ್ಲಿ ಭಾಗವಹಿಸದಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.




