August 12, 2026

ಬಂಟ್ವಾಳ: ತಾಲೂಕು ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಭೇಟಿ-ಕಡತ ಪರಿಶೀಲನೆ

0
IMG-20260812-WA0068

ಬಂಟ್ವಾಳ: ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ತಾಲೂಕು ಕಚೇರಿಗಳಿಗೆ

ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದರ ಅಂಗವಾಗಿ ಬಂಟ್ವಾಳ ತಾಲೂಕು ಕಚೇರಿಗೂ ಇನ್ಸ್ ಪೆಕ್ಟರ್ ಚಂದ್ರಶೇಖರ್ ಕೆ.ಎನ್. ನೇತೃತ್ವದ ಲೋಕಾಯುಕ್ತ ತಂಡ ಭೇಟಿ ನೀಡಿ ವಿವಿಧ ವಿಭಾಗಗಳ ಕಡತಗಳು ಹಾಗೂ ದಾಖಲೆಗಳನ್ನು ಪರಿಶೀಲಿಸಿತು. ಕಚೇರಿಯಲ್ಲಿನ ಕಡತಗಳ ವಿಲೇವಾರಿ, ಬಾಕಿ ಇರುವ ಅರ್ಜಿಗಳು ಹಾಗೂ ಪ್ರಕರಣಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳು ಮತ್ತು ಕಡತಗಳನ್ನು ಪರಿಶೀಲಿಸುವ ಉದ್ದೇಶದಿಂದ ಈ ಭೇಟಿ ನಡೆದಿದೆ ಎಂದು ತಿಳಿದುಬಂದಿದೆ. ಮೇಲಾಧಿಕಾರಿಗಳ ನಿರ್ದೇಶನದಂತೆ ಜಿಲ್ಲೆಯ ಎಲ್ಲ ತಾಲೂಕು ಕಚೇರಿಗಳಲ್ಲೂ ಏಕಕಾಲದಲ್ಲಿ ಪರಿಶೀಲನೆ ಕೈಗೊಳ್ಳಲಾಗಿದ್ದು, ಆಯಾ ಕಚೇರಿಗಳಲ್ಲಿರುವ ಸಂಬಂಧಿತ ಕಡತ ಹಾಗೂ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸಿದರು.

ಬಂಟ್ವಾಳ ತಾಲೂಕು ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿದ ಅಧಿಕಾರಿಗಳು ಸಂಬಂಧಿತ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಪ್ರಕರಣಕ್ಕೆ ಸಂಬಂಧಿಸಿದ ಕಡತಗಳಲ್ಲಿರುವ ದಾಖಲೆಗಳು, ಹಿಂದಿನ ಆದೇಶಗಳು, ಅರ್ಜಿಗಳ ವಿಲೇವಾರಿ ಹಾಗೂ ಸಂಬಂಧಿತ ಪ್ರಕ್ರಿಯೆಗಳ ಕುರಿತು ಪರಿಶೀಲನೆ ನಡೆಸಿದರು.

ಸಾರ್ವಜನಿಕರಿಗೆ ಸಂಬಂಧಿಸಿದ ಕಡತಗಳು ನಿಗದಿತ ಅವಧಿಯಲ್ಲಿ ವಿಲೇವಾರಿಯಾಗಬೇಕು ಹಾಗೂ ಯಾವುದೇ ಕಾರಣಕ್ಕೂ ಅನಗತ್ಯ ವಿಳಂಬವಾಗಬಾರದು ಎಂಬ ನಿಟ್ಟಿನಲ್ಲಿ ಲೋಕಾಯುಕ್ತ ಪರಿಶೀಲನೆ ಮಹತ್ವ ಪಡೆದಿದೆ. ಈ ಹಿಂದೆಯೂ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಕಡತಗಳು ಬಾಕಿ ಉಳಿದಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಕೇಳಿಬಂದಿದ್ದವು.

ಜಿಲ್ಲೆಯ ಎಲ್ಲ ತಾಲೂಕು ಕಚೇರಿಗಳಲ್ಲಿ ಏಕಕಾಲದಲ್ಲಿ ನಡೆದಿರುವ ಈ ಪರಿಶೀಲನೆಯಿಂದ ಕಂದಾಯ ಇಲಾಖೆಯ ಕಚೇರಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಪರಿಶೀಲನೆಯ ಬಳಿಕ ಸಂಬಂಧಿತ ಕಡತಗಳ ಸ್ಥಿತಿ ಹಾಗೂ ಕಂಡುಬಂದಿರುವ ಅಂಶಗಳ ಕುರಿತು ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!