August 13, 2026

ವಿಧಾನ ಪರಿಷತ್ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಆಯ್ಕೆ

0
image_editor_output_image203773279-1786612461398

ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ ಆರಂಭವಾಗುತ್ತಿದ್ದಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ನೂತನ ಸಭಾ ನಾಯಕರೆಂದು ಹಂಗಾಮಿ ಸಭಾಪತಿ ಪುಟ್ಟಣ್ಣ ಘೋಷಣೆ ಮಾಡಿದ್ದಾರೆ.

ಆ ಬಳಿಕ ಕಲಾಪವನ್ನು ಉದ್ದೇಶಿಸಿ ಮಾತನಾಡಿದ ಯತೀಂದ್ರ ಅವರು, ಮೊದಲ ಬಾರಿ ಸಚಿವನಾಗಿ, ಸಭಾನಾಯಕನಾಗಿ ಆಯ್ಕೆ ಆಗಿದ್ದೇನೆ. ಅನುಭವ ಕಡಿಮೆ ಇರುವ ಕಾರಣ ಏನಾದರೂ ತಪ್ಪಾದರೆ ಸರಿಪಡಿಸಿ ಮಾರ್ಗದರ್ಶನ ನೀಡುವಂತೆ ಆಡಳಿತ ಮತ್ತು ವಿಪಕ್ಷ ಸದಸ್ಯರನ್ನು ಅವರು ಮನವಿ ಮಾಡಿದ್ದಾರೆ.

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದೆ. ಈ ಅಧಿವೇಶನದಲ್ಲಿ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಹಲವಾರು ಅಸ್ತ್ರಗಳನ್ನು ಪ್ರಯೋಗಿಸಲು ಎನ್‌ಡಿಎ ಮೈತ್ರಿಕೂಟದ ಬಿಜೆಪಿ ಮತ್ತು ಜೆಡಿಎಸ್ ದೋಸ್ತಿ ಪಕ್ಷಗಳು ರೆಡಿಯಾಗಿವೆ. ಸದನದಲ್ಲಿ ಎರಡೂ ಪಕ್ಷಗಳು ಹಲವಾರು ಪ್ರಮುಖ ವಿಚಾರದಲ್ಲಿ ಡಿಕೆಶಿ ಸರಕಾರದ ವಿರುದ್ಧ ಜಂಟಿಯಾಗಿ ಹೋರಾಡಲು ಸಜ್ಜಾಗಿವೆ.

Leave a Reply

Your email address will not be published. Required fields are marked *

error: Content is protected !!