August 14, 2026

ಬೆಳ್ತಂಗಡಿ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image-1758508146-1786695428253

ಬೆಳ್ತಂಗಡಿ: 2008 ರ ಪ್ರಕರಣವೊಂದರ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 46 ವರ್ಷದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಹಮ್ಮದ್ ಶರೀಪ್ (46) ಎಂದು ಗುರುತಿಸಲಾಗಿದೆ.

ವೇಣೂರು ಪೊಲೀಸ್ ಠಾಣಾ ಅಕ್ರ 71/2008, ಕಲಂ:457 380 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡು ಸಿ.ಸಿ. ಸಂಖ್ಯೆ: 535/2016 ರಂತೆ ರಲ್ಲಿ ಆತನ ವಿರುದ್ಧ ವಾರಂಟ್ ಹೊರಡಿಸಲಾಗಿತ್ತು.

ಅಗಸ್ಟ್‌ 13 2026 ರಂದು ವೇಣೂರು ಠಾಣಾ ಸಿಬ್ಬಂದಿಗಳಾದ ಎ ಎಸ್ ಐ ಬೆಣ್ಣಿಚನ್ ,ಪಿಸಿ ಬಸವರಾಜ್ ಮತ್ತು ಬೆಳ್ತಂಗಡಿ ಉಪ ವಿಭಾಗ ಕಚೇರಿಯ ಸಿಬ್ಬಂದಿ ಪ್ರವೀಣ್ ಎಮ್ ರವರುಗಳ ತಂಡ ದಸ್ತಗಿರಿ ಮಾಡಿ, ಬೆಳ್ತಂಗಡಿ ನ್ಯಾಯಾಧೀಶರ ಸಮ್ಮುಖದಲ್ಲಿ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!