August 14, 2026

ಗುಟ್ಕಾ-ಪಾನ್‌ ಮಸಾಲಾ ಬ್ಯಾನ್‌ ಆಗಿ ಎರಡೇ ದಿನಕ್ಕೆ ಆದೇಶ ಹಿಂಪಡೆದ ಸರ್ಕಾರ

0
IMG-20260812-WA0046

ಬೆಂಗಳೂರು: ಕೇವಲ ಎರಡು ದಿನಗಳ ಹಿಂದೆ ರಾಜ್ಯದಲ್ಲಿ ಜಾರಿಯಾದ ಪಾನ್‌ ಮಸಾಲಾ ಉತ್ಪನ್ನಗಳ ಮೇಲೆ ಒಂದು ವರ್ಷದ ಬ್ಯಾನ್‌ ಇದೀಗ ರದ್ದಾಗಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಆದೇಶ ವಾಪಾಸ್‌ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆಗಸ್ಟ್ 10ರಂದು ರಾಜ್ಯದಲ್ಲಿ ತಂಬಾಕು ಹಾಗೂ ನಿಕೋಟಿನ್ ಹೊಂದಿರುವ ಉತ್ಪನ್ನಗಳ ಮೇಲೆ ನಿಷೇಧ ಹೇರಿತ್ತು. ಈ ಆದೇಶದಡಿ ಗುಟ್ಕಾ, ಪಾನ್ ಮಸಾಲಾ ಸೇರಿದಂತೆ ಸಂಬಂಧಿತ ಉತ್ಪನ್ನಗಳ ತಯಾರಿಕೆ, ಸಂಗ್ರಹಣೆ, ಸಾಗಣೆ, ವಿತರಣೆ ಮತ್ತು ಮಾರಾಟವನ್ನು ನಿಷೇಧಿಸಲಾಗಿತ್ತು.

ಆದರೆ, ನಿಷೇಧ ಆದೇಶ ಜಾರಿಯಾದ ಕೆಲವೇ ದಿನಗಳಲ್ಲಿ ಸರ್ಕಾರ ಅದನ್ನು ಹಿಂಪಡೆದಿದೆ ಎಂದು ವರದಿಯಾಗಿದೆ. ನಿಷೇಧ ಹಿಂಪಡೆಯುವ ಕುರಿತು ಸರ್ಕಾರದ ಅಧಿಕೃತ ಆದೇಶದ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.

Leave a Reply

Your email address will not be published. Required fields are marked *

error: Content is protected !!