August 17, 2026

ಪುಂಜಾಲಕಟ್ಟೆ: ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದು ವೃದ್ಧೆಯ ಕೈಯಲ್ಲಿದ್ದ ಚಿನ್ನದ ಬಳೆ ಸುಲಿಗೆ ಪ್ರಕರಣ: ಆರೋಪಿಯ ಬಂಧನ

0
image_editor_output_image-1248722099-1786956205258

ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್‌ ಠಾಣಾ ವ್ಯಾಪ್ತಿಯ ಬಂಟ್ವಾಳ ತೆಂಕಕಜೆಕಾರು ಉದ್ದದ ಗುಡ್ಡೆ ಎಂಬಲ್ಲಿ ಪ್ರಕರಣದ ಪಿರ್ಯಾದಿದಾರರಾದ ಸಾದಿಕ್‌ ಎಂಬವರ ತಾಯಿ ಅವ್ವಮ್ಮ (82) ಎಂಬವರು ದಿನಾಂಕ: 14.08.2026 ರಂದು ಮನೆಯಲ್ಲಿ ಒಬ್ಬಂಟಿಯಾಗಿದ್ದಾಗ ಯಾರೋ ಅಪರಿಚಿತ ವ್ಯಕ್ತಿಯೋರ್ವನು ಮುಖಚಹರೆ ಕಾಣದಂತೆ ಮುಖಕ್ಕೆ ಬಟ್ಟೆ ಸುತ್ತಿಕೊಂಡು ಮನೆಯೊಳಗೆ ಬಂದು ಪಿರ್ಯಾದಿದಾರರ ತಾಯಿಯ ಎರಡು ಕೈಯಲ್ಲಿದ್ದ ಸುಮಾರು 5,00,000/- ಮೌಲ್ಯದ ಸುಮಾರು 40 ಗ್ರಾಂ ತೂಕದ ಎರಡು ಚಿನ್ನದ ಬಳೆಗಳನ್ನು ಬಲತ್ಕಾರವಾಗಿ ಎಳೆದುಕೊಂಡು ಹೋಗಿದ್ದು, ಈ ವೇಲೆ ಸದ್ರಿಯವರ ಕೈಗೆ ರಕ್ತಗಾಯವಾಗಿರುವ ಬಗ್ಗೆ ಸಾದಿಕ್‌ ಎಂಬವರು ನೀಡಿದ ದೂರಿನಂತೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಠಾಣಾ ಅ.ಕ್ರ: 70/2026, ಕಲಂ: 309(6) BNS- 2023 ರಂತೆ ಪ್ರಕರಣ ದಾಖಲಾಗಿರುತ್ತದೆ.

ಸದ್ರಿ ಪ್ರಕರಣದ ತನಿಖೆ ನಡೆಸಲಾಗಿ ದಿನಾಂಕ: 16.08.2026 ರಂದು ಈ ಪ್ರಕರಣದ ಆಪಾದಿತನಾದ ಹಾಗೂ ಸದ್ರಿ ಅವ್ವಮ್ಮ (82)ರವರ ಮೊಮ್ಮಗನಾದ ಬಂಟ್ವಾಳ ತೆಂಕಕಜೆಕಾರು ನಿವಾಸಿ ಶಬೀರ್ (33) ಎಂಬಾತನನ್ನು ಬಂಧಿಸಿ ಆತನಿಂದ ಎರಡು ಚಿನ್ನದ ಬಳೆಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಆಪಾದಿತನನ್ನು ವಿಚಾರಣೆ ನಡೆಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು

ಈ ಪ್ರಕರಣವನ್ನು ಪತ್ತೆಕಾರ್ಯದಲ್ಲಿ ಬೆಳ್ತಂಗಡಿ ಪೊಲೀಸ್‌ ಉಪಾಧೀಕ್ಷಕರಾದ ಶ್ರೀಮತಿ ರೋಹಿಸಣಿ ಸಿ.ಕೆ ರವರ ನೇತೃತ್ವದಲ್ಲಿ ಬೆಳ್ತಂಗಡಿ ಗ್ರಾಮಾಂತರ ಸಿ.ಪಿ.ಐ ರವಿ ಬಿ.ಎಸ್‌, ಪುಂಜಾಲಕಟ್ಟೆ ಠಾಣಾ ಪಿ.ಎಸ್‌.ಐ ರಾಜೇಶ್‌ ಕೆ.ವಿ, ಸಿಬ್ಬಂದಿಗಳಾದ ಎ ಎಸ್ ಐ ಬೆನ್ನಿಚ್ಚನ್‌, ಪ್ರವೀಣ್‌ ಮೂರುಗೋಳಿ, ರಾಜೇಶ್‌, ವಿಜಯ್‌ ಕುಮಾರ್‌, ರಾಹುಲ್‌ ರಾವ್‌, ನಾಗರಾಜ್‌, ರಜಿತ್‌, ಬಸವರಾಜ್‌, ಸತೀಶ್ ರವರು, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ್‌ ಮತ್ತು ಸಂಪತ್‌ ರವರು ಕರ್ತವ್ಯ ನಿರ್ವಹಿಸಿರುತ್ತಾರೆ.

Leave a Reply

Your email address will not be published. Required fields are marked *

error: Content is protected !!