ಬೆಳ್ತಂಗಡಿ: ಬಸ್ ನಿಲ್ದಾಣದ ಬಳಿ ವ್ಯಕ್ತಿಯ ಮೃತದೇಹ ಪತ್ತೆ
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಬಸ್ ನಿಲ್ದಾಣದ ಬಳಿಯ ಬಾರೊಂದರ ಎದುರುಗಡೆ ವೃದ್ಧರೊಬ್ಬರ ಮೃತದೇಹ ಆ.18 ಮಂಗಳವಾರ ಬೆಳಗ್ಗೆ ಪತ್ತೆಯಾಗಿದೆ.
ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚಾಳ ನಿವಾಸಿ ಮರಿಯಪ್ಪ (70) ಎಂದು ಪೊಲೀಸ್ ತನಿಖೆಯಿಂದ ಗುರುತಿಸಲಾಗಿದೆ.
ಈ ವ್ಯಕ್ತಿ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.





