ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಬೆಲೆಯಲ್ಲಿ 102.50 ರೂ ಕಡಿತ
ನವದೆಹಲಿ: ಇಂದಿನಿಂದ ಜಾರಿಗೆ ಬರುವಂತೆ 19 ಕೆಜಿ ವಾಣಿಜ್ಯ ಎಲ್ ಪಿ ಜಿ ಸಿಲಿಂಡರ್ ಬೆಲೆ ರೂ.102.50ರಷ್ಟು ಕಡಿತ ಮಾಡಲಾಗಿದೆ.
ಇಂದಿನಿಂದ ಜಾರಿಗೆ ಬರುವಂತೆ ರೂ.102.50 ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆ ಮಾಡಿದ ಹಿನ್ನಲೆಯಲ್ಲಿ, 19 ಕೆಜಿ ವಾಣಿಜ್ಯ ಸಿಲಿಂಡರ್ ಇಂದಿನಿಂದ ದೆಹಲಿಯಲ್ಲಿ 1998.50 ರೂ.ಗಳಾಗಲಿದೆ ಎಂದು ತಿಳಿದು ಬಂದಿದೆ.
ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ಬೆಲೆ ಹೆಚ್ಚಳವಾದ ಕಾರಣ, ರೆಸ್ಟೋರೆಂಟ್ ಗಳು, ಹೋಟೆಲ್ ಮತ್ತು ಚಹಾ ಮಳಿಗೆಗಳು ಸೇರಿದಂತೆ ಇತ್ಯಾದಿಗಳ ಮಾಲೀಕರಿಗೆ ಬಿಗ್ ರಿಲೀಫ್ ನೀಡಿದಂತೆ ಆಗಿದೆ.
ಕಳೆದ ತಿಂಗಳು ಡಿಸೆಂಬರ್ 1 ರಂದು 19 ಕೆಜಿ ಎಲ್ ಪಿಜಿ ಸಿಲಿಂಡರ್ ಗಳ ಬೆಲೆಗಳನ್ನು 100 ರೂ.ಗಳಷ್ಟು ಹೆಚ್ಚಿಸಲಾಗಿದ್ದು, ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್ ಗಳ ಬೆಲೆ2,101 ರೂ.ಗಳಿಗೆ ಏರಿತ್ತು.




