August 18, 2026

ಸಚಿವ ಕೃಷ್ಣಬೈರೇಗೌಡ ಅವರಿಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆ

0
krishna-byre-gowda-gets-bengaluru-development-ministry-v0-egrblqr7de5h1

ಬೆಂಗಳೂರು: ರಾಜ್ಯ ಸಚಿವ ಸಂಪುಟದ ಖಾತೆ ಹಂಚಿಕೆಯಲ್ಲಿ ಕೆಲ ಬದಲಾವಣೆ ಆಗಿದ್ದು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣಬೈರೇಗೌಡ ಅವರಿಗೆ ಸಂಸದೀಯ ವ್ಯವಹಾರಗಳ ಇಲಾಖೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಶಿಫಾರಸಿನಂತೆ ಸಚಿವರ ಖಾತೆಗಳ ಮರುಹಂಚಿಕೆ ಮಾಡಿದ್ದಾರೆ ಎಂದು ರಾಜ್ಯಪಾಲ ಕಚೇರಿಯ ಪ್ರಕಟನೆ ತಿಳಿಸಿದೆ.

ಕೃಷ್ಣ ಭೈರೇಗೌಡ ಅವರು ಈಗಾಗಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ, ನಗರದ ಐದು ಮಹಾನಗರ ಪಾಲಿಕೆಗಳು, ಜಲಮಂಡಳಿ ಹಾಗೂ ನಮ್ಮ ಮೆಟ್ರೋ ಸೇರಿದಂತೆ ಬೆಂಗಳೂರು ನಗರದ ಮೂಲಸೌಕರ್ಯಕ್ಕೆ ಸಂಬಂಧಿಸಿದ ಪ್ರಮುಖ ವಿಭಾಗಗಳನ್ನು ಮುನ್ನಡೆಸುತ್ತಿದ್ದಾರೆ. ಇದೀಗ ಸಂಸದೀಯ ವ್ಯವಹಾರಗಳೂ ಸೇರ್ಪಡೆಯಾಗಿರುವುದರಿಂದ ಅವರ ಕಾರ್ಯಭಾರ ಮತ್ತಷ್ಟು ವಿಸ್ತಾರಗೊಂಡಿದೆ.

ಬೆಂಗಳೂರು ಅಭಿವೃದ್ಧಿಗೆ ಸಂಬಂಧಿಸಿದ ಪ್ರಮುಖ ಸಂಸ್ಥೆಗಳಾದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಬೆಂಗಳೂರು ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಉಸ್ತುವಾರಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೇ ತಮ್ಮ ಬಳಿ ಉಳಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!