ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಬೆಂಗಳೂರು: ರಾಜ್ಯದ ಮಾಜಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಹಾಗೂ ಹಿರಿಯ ಬಿಜೆಪಿ ನಾಯಕ ಬಿ.ಸಿ. ನಾಗೇಶ್ ಅವರು ನಿಧನರಾದರು.
ಅವರಿಗೆ 67 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಾಗೇಶ್ ಅವರು ಚಿಕಿತ್ಸೆ ಪಡೆಯುತ್ತಿದ್ದರೂ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಬಿ.ಇ. ಇಂಜಿನಿಯರಿಂಗ್ ಪದವೀಧರರಾಗಿದ್ದ ಬಿ.ಸಿ. ನಾಗೇಶ್ ಅವರು ತಮ್ಮ ಸಾರ್ವಜನಿಕ ಜೀವನವನ್ನು ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೂರ್ಣಕಾಲಿಕ ಕಾರ್ಯಕರ್ತರಾಗಿ ಆರಂಭಿಸಿದ್ದರು. ನಂತರ ಬಿಜೆಪಿ ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡ ಅವರು ತುಮಕೂರು ಜಿಲ್ಲೆಯ ತಿಪಟೂರು ಕ್ಷೇತ್ರದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದರು.





