ಬಂಟ್ವಾಳ: ಮಾನಸಿಕವಾಗಿ ಮನನೊಂದು 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ
ಬಂಟ್ವಾಳ: ಪಿಲಾತಬೆಟ್ಟು ಗ್ರಾಮದ ನೈನಾಡು ನಿವಾಸಿ, 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಅಪ್ರಾಪ್ತ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ನೈನಾಡು ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಬಾಲಕನ ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದು, ಸ್ಟ್ರೋಕ್‌ಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ತಂದೆ ಇಲ್ಲದ ಹಿನ್ನೆಲೆಯಲ್ಲಿ ತಾಯಿಯೇ ಬಾಲಕ ಹಾಗೂ ಕುಟುಂಬಕ್ಕೆ ಪ್ರಮುಖ ಆಸರೆಯಾಗಿದ್ದರು.
ತಾಯಿಯ ಅನಾರೋಗ್ಯದ ವಿಚಾರವಾಗಿ ಬಾಲಕ ಮಾನಸಿಕವಾಗಿ ನೊಂದಿದ್ದ ಎನ್ನಲಾಗಿದ್ದು, ಶಾಲೆಯಲ್ಲಿಯೂ ಆಗಾಗ್ಗೆ ತಾಯಿಯ ಆರೋಗ್ಯದ ಬಗ್ಗೆ ವಿಚಾರಿಸುತ್ತಿದ್ದ ಎಂದು ತಿಳಿದುಬಂದಿದೆ.
ಮೃತ ಬಾಲಕ ಮೂವರು ಗಂಡು ಮಕ್ಕಳಲ್ಲಿ ಕಿರಿಯವನಾಗಿದ್ದ. ಘಟನೆಗೆ ಸಂಬಂಧಿಸಿದಂತೆ ಪುಂಜಾಲಕಟ್ಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.





