August 21, 2026

Gen Z ಪ್ರತಿಭಟನೆಯಲ್ಲಿ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದ ಯುವಕನೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ರಾಹುಲ್ ಗಾಂಧಿ: FIR ದಾಖಲಿಸುವಂತೆ ಆಗ್ರಹ

0
IMG-20260821-WA0037

ನವದೆಹಲಿ: ಜುಲೈ 20ರಂದು ನಡೆದ Gen Z ಪ್ರತಿಭಟನೆ ವೇಳೆ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದ ಯುವಕನೊಂದಿಗೆ ಕಾಂಗ್ರೆಸ್ ಸಂಸದ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶುಕ್ರವಾರ ದಿಲ್ಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

NEET ಪ್ರತಿಭಟನೆಯ ಸಂದರ್ಭದಲ್ಲಿ ಪೆಲೆಟ್ ಗನ್‌ನಿಂದ ಗಾಯಗೊಂಡಿದ್ದ ಯುವಕ ಸಾಹಿಲ್ ಲೋಚಬ್ ಹಾಗೂ ಇತರರೊಂದಿಗೆ ರಾಹುಲ್ ಗಾಂಧಿ ಪೊಲೀಸ್ ಠಾಣೆಗೆ ತೆರಳಿದ್ದಾರೆ. ಈ ವೇಳೆ ಪೊಲೀಸ್ ಠಾಣೆ ಆವರಣದಲ್ಲಿ ಅನಿರೀಕ್ಷಿತ ಬೆಳವಣಿಗೆ ನಡೆಯಿತು. ರಾಹುಲ್ ಗಾಂಧಿ ಪೊಲೀಸ್ ಠಾಣೆಗೆ ಆಗಮಿಸಿದ್ದು ಅಧಿಕಾರಿಗಳಿಗೆ ಅಚ್ಚರಿ ಮೂಡಿಸಿತು.

ಜುಲೈ 20ರ Gen Z ಪ್ರತಿಭಟನೆ ವೇಳೆ ಪೆಲೆಟ್ ಗನ್ ಬಳಕೆ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸುವಂತೆ ರಾಹುಲ್ ಗಾಂಧಿ ಪೊಲೀಸರಿಗೆ ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!