October 9, 2026

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯ ಬಂಧನ

0
IMG-20260822-WA0023

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮಹಿಳೆಯೊಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಮಹಿಳೆಯನ್ನು ದಾವಣಗೆರೆಯ ಬೇಗೂರು ರಸ್ತೆಯ ನಿವಾಸಿ ವಾಣೀಶ್ರೀ ಅಲಿಯಾಸ್ ರೇಣುಕಾ ಎಂದು ಗುರುತಿಸಲಾಗಿದೆ.

 

2009ರಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆಕೆ ಆರೋಪಿಯಾಗಿದ್ದಳು. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ಸುಮಾರು 17 ವರ್ಷಗಳಿಂದ ತಲೆಮರೆಸಿಕೊಂಡಿದ್ದಳು.

ಪೊಲೀಸರು ಶುಕ್ರವಾರ ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಳಿಕ ಆಕೆಯನ್ನು ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!