August 23, 2026

ವಿಟ್ಲ: ಬ್ರಹ್ಮಶ್ರೀ ವಿವಿದೋದ್ಧೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ

0
image_editor_output_image-2127429654-1787465666617

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನಲ್ಲಿ ಶನಿವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ವಿಟ್ಲ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿ ಲಭಿಸಿದೆ. ಸಂಘಕ್ಕೆ ಪ್ರಥಮ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ ಸಾಧನಾ ಪುರಸ್ಕಾರ ಲಭಿಸಿದೆ.

2025-26ನೇ ಆರ್ಥಿಕ ಸಾಲಿನಲ್ಲಿ ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘವು ರೂ. 294.84 ಕೋಟಿ ವ್ಯವಹಾರ, ರೂ.24. 37 ಕೋಟಿ ಠೇವಣಿ, ರೂ. 21.94 ಕೋಟಿ ಸಾಲ ಹಾಗೂ ರೂ. 48.51 ಲಕ್ಷ ಲಾಭ ಗಳಿಸಿ, ಅಭೂತಪೂರ್ವ ಸಾಧನೆ ಮಾಡಿ ಈ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ|| ಎಂ.ಎನ್ ರಾಜೇಂದ್ರ ಕುಮಾರ್ ಅವರು ಬ್ರಹ್ಮಶ್ರೀ ವಿವಿದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ ಎನ್ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀ ಜಯಂತ್ ಪಿ ಅವರನ್ನು ಪ್ರಶಸ್ತಿ ನೀಡಿ ಸಭೆಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಹಕಾರ ಸಂಘಗಳ ಉಪನಿಬಂಧಕರಾದ ಶ್ರೀ ಎಚ್ ಎನ್ ರಮೇಶ್, ಸಂಘದ ನಿರ್ದೇಶಕರಾದ ಶ್ರೀ ಸಂಜೀವ ಪೂಜಾರಿ ಎಂ ಎಸ್, ಶ್ರೀ ಪ್ರಕಾಶ್ ಕೆ ವಿಟ್ಲ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!