August 25, 2026

ವಿಟ್ಲ: ಕೋಟಿಕೆರೆಯಲ್ಲಿ ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

0
image_editor_output_image1920685031-1787625741540

ವಿಟ್ಲ: ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕೋಟಿಕೆರೆ ಎಂಬಲ್ಲಿ ನಡೆದಿದೆ.

ಮೃತರನ್ನು ವಿಟ್ಲ ಕಸಬಾ ದ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಎಂಬವರ ಪುತ್ರ ಎಸ್ ಸಿ ಡಿಸಿಸಿ ಬ್ಯಾಂಕ್ ಉದ್ಯೋಗಿ ಲಿತಿನ್(32) ಎಂದು ಗುರುತಿಸಲಾಗಿದೆ.

ಬೆಳಗ್ಗಿನ ಜಾವ ಈ ಘಟನೆ ನಡೆದಿದ್ದು ಸ್ಥಳೀಯರು ಕೂಡಲೇ ಮೇಲಕ್ಕೆತ್ತಿದರೂ ಅಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ.

ಮೃತರು ತಂದೆ, ತಾಯಿ, ಪತ್ನಿ ಹಾಗೂ ಮಗುವನ್ನು ಆಗಲಿದ್ದಾರೆ.

Leave a Reply

Your email address will not be published. Required fields are marked *

error: Content is protected !!