August 25, 2026

ದಾವಣಗೆರೆ: ಕಾಂಗ್ರೆಸ್ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ನಡುವೆ ಅಪಘಾತ

0
IMG-20260825-WA0016

ದಾವಣಗೆರೆ: ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರಿಗೆ ತಾಲೂಕಿನ ಕೆ.ಆರ್. ಹಳ್ಳಿ ಗೇಟ್ ಬಳಿ ಮತ್ತೊಂದು ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದ ಘಟನೆ ಸೋಮವಾರ ನಡೆದಿದೆ.

ಶಾಸಕ ಸಮರ್ಥ್ ಅವರ ಕಾರು ಜಖಂಗೊಂಡಿದ್ದು, ಅದೃಷ್ಟವಶಾತ್ ಶಾಸಕರು ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಡಿಕ್ಕಿ ಹೊಡೆದ ಕಾರಿನ ಚಾಲಕ ಗಾಯಗೊಂಡಿದ್ದಾನೆ. ಗಾಯಗೊಂಡವರನ್ನು ಶಾಸಕರು ಹಾಗೂ ಅವರ ಚಾಲಕ ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದರು. ಶಾಸಕರ ಕಾರು ಬೆಂಗಳೂರಿಂದ ದಾವಣಗೆರೆಗೆ ತೆರಳುತ್ತಿತ್ತು.

Leave a Reply

Your email address will not be published. Required fields are marked *

error: Content is protected !!