ಉಡುಪಿ: ದೇವಸ್ಥಾನದ ಕೆರೆಯಲ್ಲಿ ಮುಳುಗಿ ಬಾಲಕ ಮೃತ್ಯು
ಉಡುಪಿ: ಬಾಲಕನೊಬ್ಬ ದೇವಸ್ಥಾನದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಘಟನೆ ಉಡುಪಿ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೃತರನ್ನು ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬವರ ಮಗ ಆದಿತ್ಯ ನಾಯಕ್(15) ಎಂದು ಗುರುತಿಸಲಾಗಿದೆ. ದೇವಸ್ಥಾನದಲ್ಲಿ ಭಜನೆ ಕಾರ್ಯಕ್ರಮ ನಡೆಯುತ್ತಿರುವುದರಿಂದ ಆದಿತ್ಯ ತನ್ನ ಸಂಬಂಧಿಯೊಂದಿಗೆ ದೇವಸ್ಥಾನಕ್ಕೆ ಬಂದಿದ್ದನು ಎಂದು ತಿಳಿದುಬಂದಿದೆ.
ಉಡುಪಿ ನಗರದ ಶ್ರೀ ಲಕ್ಷ್ಮಿ ವೆಂಕಟರಮಣ ದೇವಸ್ಥಾನದ ಕೊಳದಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳೀಯ ನಿವಾಸಿಗಳ ಮನವಿಗೆ ಸ್ಪಂದಿಸಿದ ಈಜು ತಜ್ಞ ಈಶ್ವರ್ ಮಲ್ಪೆ, ಸುಮಾರು ತಾಸಿನ ಕಾರ್ಯಾಚರಣೆ ಬಳಿಕ ಬಾಲಕನ ಶವವನ್ನು ಮೇಲಕ್ಕೆತ್ತಲಾಯಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.





