August 26, 2026

ಕಡಬ: ಆ್ಯಸಿಡ್ ದಾಳಿ ಪ್ರಕರಣ; ಆರೋಪಿಗೆ 10 ವರ್ಷ ಕಠಿಣ ಜೈಲುಶಿಕ್ಷೆ, ದಂಡ

0
IMG-20260826-WA0017

ಕಡಬ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ವರ್ಷದ ಹಿಂದೆ ದಾಖಲಾಗಿದ್ದ ಆಯಸಿಡ್ ದಾಳಿ ಪ್ರಕರಣದ ಆರೋಪಿಗೆ ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಕಠಿಣ ಶಿಕ್ಷೆ ವಿಧಿಸಿದೆ.

2020ರಲ್ಲಿ ಕಡಬ ತಾಲೂಕಿನ ಕೊಡಿಟಬಳ ನಿವಾಸಿ ಜಯಾನಂದ. ಕೆ (60) ಎಂಬಾತ ಆಯಸಿಡ್ ದಾಳಿ ನಡೆಸಿದ ಬಗ್ಗೆ ಪ್ರಕರಣ ದಾಖಲಾಗಿತ್ತು. ಆಗಿನ ತನಿಖಾಧಿಕಾರಿಯಾಗಿದ್ದ ಪುತ್ತೂರು ಮಹಿಳಾ ಠಾಣಾ ಪೊಲೀಸ್ ನಿರೀಕ್ಷಕ ಕುಸುಮಧರ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಮಂಗಳೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಸದಾನಂದ ನಾಗಪ್ಪನಾಯ್ಕ್ ವಾದ-ಪ್ರತಿವಾದ ಆಲಿಸಿ ಆರೋಪಿಗೆ 326ಅ ಐಇ ಸೆಕ್ಷನ್‌ನಡಿ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 3,00,000 ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ವಿಫಲವಾದಲ್ಲಿ ಮತ್ತೆ 2 ವರ್ಷಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ.

ಕಲಂ 504 ಐಇ ಸೆಕ್ಷನ್‌ನಡಿ 1 ವರ್ಷದ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ವಿಫಲವಾದಲ್ಲಿ ಮತ್ತೆ 3 ತಿಂಗಳ ಸರಳ ಕಾರಾಗೃಹ ಶಿಕ್ಷೆ ಅನುಭವಿಸಲು ಆದೇಶಿಸಿದ್ದಾರೆ.

ಸರಕಾರಿ ಅಭಿಯೋಜಕರಾದ ಕೃಷ್ಣವೇಣಿ, ಹರಿಶ್ಚಂದ್ರ ಉದ್ಯಾವರ, ಪ್ರಕಾಶ್‌ಚಂದ್ರ ಶೆಟ್ಟಿ, ಜಯಂತಿ ಕೆ. ವಾದ ಮಂಡಿಸಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!