October 16, 2026

ಕಂಟೈನರ್‌ ಟ್ರಕ್‌ಗೆ ಬಸ್‌ ಡಿಕ್ಕಿ: ಐವರು ಮಹಿಳೆಯರು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು, ಹಲವರಿಗೆ ಗಾಯ

0
IMG-20260826-WA0018

ಹೈದರಾಬಾದ್: ಕಂಟೈನರ್‌ ಟ್ರಕ್‌ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದ ಪರಿಣಾಮ ಐವರು ಮಹಿಳೆಯರು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದು, ಸುಮಾರು 12 ಮಂದಿ ಗಾಯಗೊಂಡಿರುವ ಘಟನೆ ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯಲ್ಲಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ.

ಹೈದರಾಬಾದ್‌-ವಿಜಯವಾಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ಸುಮಾರು 4.30ಕ್ಕೆ ಅಪಘಾತ ಸಂಭವಿಸಿದೆ.

ಹೈದರಾಬಾದ್‌ನಿಂದ ಏಲೂರು ಮೂಲಕ ವಿಜಯವಾಡದತ್ತ ತೆರಳುತ್ತಿದ್ದ ಖಾಸಗಿ ಟ್ರಾವೆಲ್ಸ್‌ ಬಸ್‌, ಮುಂದೆ ಸಾಗುತ್ತಿದ್ದ ಕಂಟೈನರ್‌ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ಅಪಘಾತದ ತೀವ್ರತೆಗೆ ಬಸ್‌ನಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ಸುಮಾರು 12 ಮಂದಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್‌ ಢಿಕ್ಕಿ ಹೊಡೆಯುವ ಮುನ್ನವೇ ಟ್ರಕ್‌ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿತ್ತು ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ. ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಒಟ್ಟು 42 ಮಂದಿ ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!