August 27, 2026

ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸಿದ ರಾಣೇಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಗೆ ದಂಡ

0
IMG-20260827-WA0007

ಹಾವೇರಿ: ಹೆಲ್ಮೆಟ್ ಧರಿಸದೆ ಬುಲೆಟ್ ಬೈಕ್ ಚಲಾಯಿಸಿದ ಹಿನ್ನೆಲೆಯಲ್ಲಿ ರಾಣೇಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಸಂಚಾರ ಪೊಲೀಸರು 500 ರೂ. ದಂಡ ವಿಧಿಸಿದ್ದಾರೆ.

ಆ.25ರಂದು ಬೈಕ್ ರ್‍ಯಾಲಿಯೊಂದರಲ್ಲಿ ಕೋಳಿವಾಡ ಹೆಲ್ಮೆಟ್ ಇಲ್ಲದೆ ಬೈಕ್ ಚಲಾಯಿಸಿದ್ದರು. ಇದು ನಗರದ ವಿವಿಧೆಡೆ ಅಳವಡಿಸಿದ್ದ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿತ್ತು. ಇದನ್ನು ಗಮನಿಸಿದ ಸಂಚಾರ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದರು. ಬಳಿಕ ಅವರು ದಂಡದ ಮೊತ್ತ ಪಾವತಿಸಿದ್ದಾರೆ.

ನೋಟಿಸ್ ನೀಡಿರುವ ವಿಚಾರವನ್ನು ಶಾಸಕ ಪ್ರಕಾಶ ಕೋಳಿವಾಡ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಎಸ್‌ಪಿ ಮೇಡಂ ಅವರು ನನಗೆ ನೋಟಿಸ್ ನೀಡಿದ್ದಾರೆ. ಅವರು ತಮ್ಮ ಕರ್ತವ್ಯ ನಿರ್ವಹಿಸಿದ್ದಾರೆ. ಗೌರವಿಸುತ್ತೇನೆ ಎಂದಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದ ಜನಪ್ರತಿನಿಧಿಗೂ ನಿಯಮಾನುಸಾರ ದಂಡ ವಿಧಿಸಿರುವ ಪೊಲೀಸರ ಕ್ರಮ ಇದೀಗ ಗಮನ ಸೆಳೆದಿದೆ.

Leave a Reply

Your email address will not be published. Required fields are marked *

error: Content is protected !!