August 30, 2026

KPSC ಹಗರಣ ಪ್ರಕರಣ: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಸಿಐಡಿ ವಶಕ್ಕೆ

0
IMG-20260830-WA0003

ಬೆಂಗಳೂರು: KPSCಯಿಂದ ಪಶು ವೈದ್ಯಾಧಿಕಾರಿಗಳ ನೇಮಕದಲ್ಲಿ ಹಗರಣ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸಿಐಡಿ ವಶಕ್ಕೆ ಪಡೆದುಕೊಂಡಿರುವುದಾಗಿ ವರದಿಯಾಗಿದೆ.

ಪಶು ವೈದ್ಯಾಧಿಕಾರಿಗಳ ಪರೀಕ್ಷಾ ನಿಯಂತ್ರಕರಾಗಿದ್ದ ಜ್ಞಾನೇಂದ್ರ ಕುಮಾರ್ ಅವರನ್ನ ಸಿಐಡಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದ್ದು, ಎರಡು ದಿನಗಳ ಬಳಿಕ ಅವರನ್ನು ವಶಕ್ಕೆ ಪಡೆದ್ದಾರೆ ಎಂದು ತಿಳಿದು ಬಂದಿದೆ.

KPSC ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆಪತ್ರಿಕೆ ಸೋರಿಕೆ, ಅಂಕ ತಿದ್ದುಪಡಿ ಹಾಗೂ ನೇಮಕಾತಿಯಲ್ಲಿನ ಅಕ್ರಮಗಳ ಕುರಿತಂತೆ ಸಿಐಡಿ ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ.

Leave a Reply

Your email address will not be published. Required fields are marked *

You may have missed

error: Content is protected !!