August 30, 2026

ಬಂಟ್ವಾಳ: ರಸ್ತೆ ಡಿವೈಡರ್ ಗೆ ಢಿಕ್ಕಿ ಹೊಡೆದು ಮಗುಚಿ ಬಿದ್ದ ಎಲ್‌ಪಿಜಿ ಸಾಗಾಟದ ಲಾರಿ

0
IMG-20260830-WA0039

ಬಂಟ್ವಾಳ: ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ತುಂಬೆ ಕಡೆಗೋಳಿ ಸಮೀಪ ಎಲ್‌ಪಿಜಿ ಸಾಗಿಸುತ್ತಿದ್ದ ಲಾರಿಯೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ಪಲ್ಟಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.ಲಾರಿಯೊಳಗೆ ಸಿಲುಕಿಕೊಂಡಿದ್ದ ಚಾಲಕ ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅವರು ಅಪಾಯದಿಂದ ಪಾರಾಗಿದ್ದಾರೆ.ಘಟನೆಯಿಂದ ಕೆಲಕಾಲ ಹೆದ್ದಾರಿಯಲ್ಲಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಬಂಟ್ವಾಳ ಟ್ರಾಫಿಕ್ ಪೊಲೀಸರು ಲಾರಿಯನ್ನು ಸ್ಥಳದಿಂದ ತೆರವುಗೊಳಿಸಿ, ಸಂಚಾರ ಸುಗಮಗೊಳಿಸಿದರು.

Leave a Reply

Your email address will not be published. Required fields are marked *

error: Content is protected !!