August 30, 2026

ಪುತ್ತೂರು ಚಲೋ’ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಪೊಲೀಸ್ ಇಲಾಖೆ: ಬಂದೋ ಬಸ್ತ್ ಕರ್ತವ್ಯಕ್ಕೆ 1 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಡಿಶನಲ್ ಎಸ್ಪಿ), 1 ಡಿವೈಎಸ್ಪಿ, 3 ಪಿಐ, 10 ಪಿಎಸ್‌ಐ, 14 ಎಎಸ್‌ಐ ಹಾಗೂ 139 ಪೊಲೀಸ್ ಸಿಬ್ಬಂದಿಗಳ ನಿಯೋಜನೆ

0
image_editor_output_image-2056334724-1788102937172

ಪುತ್ತೂರು : ಆಗಸ್ಟ್ 31ರಂದು ನಡೆಯಲಿರುವ ‘ಪುತ್ತೂರು ಚಲೋ’ ಕಾರ್ಯಕ್ರಮಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದ್ದು, ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪುತ್ತೂರು ನಗರ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಪೊಲೀಸ್ ಪಥಸಂಚಲನ ನಡೆಸಲಾಯಿತು.


ಕಾರ್ಯಕ್ರಮ ಶಾಂತಿಯುತವಾಗಿ ನಡೆಯುವಂತೆ ಮುನ್ನೆಚ್ಚರಿಕಾ ಕ್ರಮವಾಗಿ ವ್ಯಾಪಕ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ವಿವಿಧ ತುಕಡಿಗಳನ್ನು ಭದ್ರತಾ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.

ಬಂದೋ ಬಸ್ತ್ ಕರ್ತವ್ಯಕ್ಕೆ 1 ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಡಿಶನಲ್ ಎಸ್ಪಿ), 1 ಡಿವೈಎಸ್ಪಿ, 3 ಪಿಐ, 10 ಪಿಎಸ್‌ಐ, 14 ಎಎಸ್‌ಐ ಹಾಗೂ 139 ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಇದರ ಜೊತೆಗೆ 5 ಕೆಎಸ್‌ಆರ್‌ಪಿ ತುಕಡಿಗಳು, 2 ಎಸ್‌ಎಎಫ್ ತಂಡಗಳು ಹಾಗೂ 7 ಡಿಎಆರ್ ತುಕಡಿಗಳನ್ನು ಭದ್ರತಾ ವ್ಯವಸ್ಥೆಗೆ ನಿಯೋಜಿಸಲಾಗಿದೆ.

ಕಾರ್ಯಕ್ರಮದ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ನಗರದ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!