October 17, 2026

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

0
image_editor_output_image541987035-1788105641439

ಮಂಗಳೂರು: ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎಲ್‌ಪಿಸಿ (LPC) ವಾರೆಂಟ್ ಆರೋಪಿತನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಮಂಜೇಶ್ವರ ನಿವಾಸಿ ಮಹಮ್ಮದ್ ತೌಸೀಫ್ (40) ಎಂದು ಗುರುತಿಸಲಾಗಿದೆ.

ಆರೋಪಿತನ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 135/2013, ಭಾರತೀಯ ದಂಡ ಸಂಹಿತೆಯ (ಐಪಿಸಿ) ಕಲಂ 392ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಆರೋಪಿತನ ವಿರುದ್ಧ ಎಲ್‌ಪಿಸಿ ವಾರೆಂಟ್ ಹೊರಡಿಸಿತ್ತು.

ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ 2026ರ ಆಗಸ್ಟ್ 29ರಂದು ಮಹಮ್ಮದ್ ತೌಸೀಫ್‌ನನ್ನು ಬಂಧಿಸಿದ್ದಾರೆ. ಬಳಿಕ ಆರೋಪಿತನನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಗೆ ಹಸ್ತಾಂತರಿಸಿ, ಅಲ್ಲಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Leave a Reply

Your email address will not be published. Required fields are marked *

error: Content is protected !!