ಪುತ್ತೂರು; ದರ್ಬೆಯಲ್ಲಿ ನಡೆದ ಘಟನೆ ಹಿನ್ನೆಲೆ ಪುತ್ತೂರು ಚಲೋಗೆ ಚಾಲನೆ
ಪುತ್ತೂರು: ನಗರದ ದರ್ಬೆಯಲ್ಲಿ ಇತ್ತೀಚೆಗೆ ನಡೆದ ಹೊಡೆದಾಟ ಪ್ರಕರಣದಲ್ಲಿ ಪೊಲೀಸರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆಪಾದಿಸಿ ಸಂಘ ಪರಿವಾರ ಮತ್ತು ಬಿಜೆಪಿ ಸಂಯುಕ್ತವಾಗಿ ಆಯೋಜಿಸಿರುವ ‘ಪುತ್ತೂರು ಚಲೋ’ ಕಾರ್ಯಕ್ರಮ ಸೋಮವಾರ ಬೆಳಗ್ಗೆ ಆರಂಭಗೊಂಡಿದೆ.
ಪುತ್ತೂರು ದರ್ಬೆಯಿಂದ ಆರಂಭಗೊಂಡಿರುವ ‘ಪುತ್ತೂರು ಚಲೋ’ ನಗರದ ಮುಖ್ಯರಸ್ತೆಯಲ್ಲಿ ಸಾಗುತ್ತಿದೆ.
ಚಲೋ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರತಿಭಟನೆಗೆ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದಾರೆ.





