February 3, 2026

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಗೆ ಕೊರೋನಾ ಸೋಂಕು ದೃಢ

0
BC-Nagesh.jpg

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ‌ ಸಚಿವ ಬಿ.ಸಿ. ನಾಗೇಶ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢ ಪಟ್ಟಿದೆ.

ನಾಗೇಶ್ ಅವರಿಗೆ ಕೋವಿಡ್ ಲಘು ಲಕ್ಷಣಗಳು ಕಾಣಿಸಿದ ಹಿನ್ನೆಲೆಯಲ್ಲಿ ಇಂದು ಅವರನ್ನು ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗಿತ್ತು.

ಪರೀಕ್ಷೆಯಲ್ಲಿ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸಚಿವರ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಕೋರಲಾಗಿದೆ.

Leave a Reply

Your email address will not be published. Required fields are marked *

error: Content is protected !!