August 31, 2026

ಬೆಳ್ತಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
IMG-20260831-WA0074

ಬೆಳ್ತಂಗಡಿ: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ಬೆಳ್ತಂಗಡಿ ಠಾಣಾ ಪೊಲೀಸರು ಆ.29ರಂದು ದಸ್ತಗಿರಿ ಮಾಡಿದ್ದಾರೆ.

ಕೇರಳ ಕಣ್ಣೂರು ನಿವಾಸಿ ಡೆನ್ನಿ ಜೋಸೆಫ್ ಅಲಿಯಾಸ್ ಆಂಟೋನಿ ಬಂಧಿತ ಆರೋಪಿ.

ಆರೋಪಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣಾ ಅ.ಕ್ರ:172/2014, ಕಲಂ: 354(B), 323, 324, 504, 506 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣ ಸಂಬಂಧ ಆರೋಪಿಯು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಆರೋಪಿಯನ್ನು ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಪಿಸಿ ಮುನಿಯ ನಾಯ್ಕ, ಪಿಸಿ ಮನು ನಾಯ್ಕ ಅವರು ಆ. 29ರಂದು ಕೇರಳದ ಕಣ್ಣೂರಿನಲ್ಲಿ ದಸ್ತಗಿರಿ ಮಾಡಿದ್ದಾರೆ. ಪೊಲೀಸರು ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!