ಚಿಕನ್ ಪೀಸ್ ತಿನ್ನುವ ವಿಚಾರಕ್ಕೆ ಜಗಳ ಕೊಲೆಯಲ್ಲಿ ಅಂತ್ಯ
ಬೆಳಗಾವಿ: ಪಾರ್ಟಿಯಲ್ಲಿ ಚಿಕನ್ ಪೀಸ್ ತಿನ್ನುವ ವಿಚಾರಕ್ಕೆ ಆರಂಭವಾದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡಿರುವ ದಾರುಣ ಘಟನೆ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ಜರುಗಿದೆ.
ಮೃತ ವ್ಯಕ್ತಿ ಸೀತಾರಾಮ್ ಹಾಗೂ ಆರೋಪಿ ಅರುಣ್‌ಕುಮಾರ್ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್ ಗ್ರಾಮದ ನಿವಾಸಿಗಳಾಗಿದ್ದು, ಇಬ್ಬರೂ ಕೂಡ ಮೂಡಲಗಿ ಪಟ್ಟಣದ ಸ್ಟಿಲ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.





