ವಿಟ್ಲ: ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ ಹಾಗೂ ವಿಟ್ಲ ಹೊರೈಝನ್ ಪಬ್ಲಿಕ್ ಸ್ಕೂಲ್ ಇದರ ಸಂಯುಕ್ತ ಆಶ್ರಯದಲ್ಲಿ ಥ್ರೋ ಬಾಲ್ ಪಂದ್ಯಾಟವು ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು.
ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ. ಅಶ್ರಫ್ ಹೂವಿನ ಸಸಿಗೆ ನೀರೆರೆಯುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ಬಿಂದು ಹಾಗೂ ದೈಹಿಕ ಶಿಕ್ಷಣ ನೋಡಲ್ ಅಧಿಕಾರಿ ಅಶೋಕ್ ಶುಭ ಹಾರೈಸಿದರು.
ಶಾಲೆಯ ಜೊತೆ ಕಾರ್ಯದರ್ಶಿ ಇಕ್ಬಾಲ್ ಹಳೆಮನೆ, ಟ್ರಸ್ಟಿ ಇಸಾಕ್ ಸಾಹೇಬ್,ಮಸೀದಿಯ ಕೋಶಾಧಿಕಾರಿ ಶರೀಫ್ ಪೊನ್ನೋಟು,ಜೊತೆ ಕಾರ್ಯದರ್ಶಿ ಅಬೂಬಕರ್ ಅನಿಲಕಟ್ಟೆ ವೇದಿಕೆಯಲ್ಲಿದ್ದರು.
ದೈಹಿಕ ಶಿಕ್ಷಕ ತಿರುಮಲೇಶ್ವರ ಪ್ರಸ್ತಾವಿಕ ಭಾಷಣ ಮಾಡಿದರು.
ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಸ್ವಾಗತಿಸಿದರು.
ಜಯಶ್ರೀ ವಂದಿಸಿದರು.
ಉಪ ಮುಖ್ಯ ಶಿಕ್ಷಕಿ ಗಾಯತ್ರಿ ಕಾರ್ಯಕ್ರಮ ನಿರೂಪಿಸಿದರು.
ವಿಟ್ಲ ವಲಯದ 20 ಶಾಲೆಗಳ ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದರು.





