September 1, 2026

ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 8 ಮಕ್ಕಳು ಸೇರಿ 11 ಮಂದಿ ಮೃತ್ಯು

0
IMG-20260901-WA0003

ಉತ್ತರ ಪ್ರದೇಶ: ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ 8 ಮಕ್ಕಳು ಸೇರಿ 11 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿ ಜಿಲ್ಲೆಯಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ 5 ಮಂದಿ ಗಾಯಗೊಂಡಿದ್ದಾರೆ.

ಮೃತರೆಲ್ಲರೂ ಕಾರ್ಖಾನೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಸವಿದ್ದವರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮನೋರಿ ವಿದ್ಯುತ್ ಸ್ಥಾವರದ ಬಳಿ ಸ್ಫೋಟ ಸಂಭವಿಸಿದ್ದು, ಕಾರ್ಖಾನೆ ಸುತ್ತಮುತ್ತಲೂ ಹಾನಿಯಾಗಿದೆ. ಕಾರ್ಖಾನೆಯ ಪಕ್ಕದಲ್ಲಿರುವ ಐದರಿಂದ ಆರು ಮನೆಗಳಿಗೂ ಹಾನಿಯಾಗಿವೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!