September 1, 2026

ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 6 ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಇತ್ತೆ ಬರ್ಪೆ ಅಬೂಬಕ್ಕರ್ ಬಂಧನ

0
image_editor_output_image-1548146556-1788278752862

ಮೂಡುಬಿದಿರೆ: ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಆರು ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ವಾರೆಂಟ್ ಜಾರಿಯಾಗಿದ್ದ ಆರೋಪಿಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

ಅಬೂಬಕರ್ ಅಲಿಯಾಸ್ ಅಬ್ದುಲ್ ಖಾದರ್ ಅಲಿಯಾಸ್ ಇತ್ತೆ ಬರ್ಪೆ ಅಬೂಬಕರ್ ಬಂಧಿತ ಆರೋಪಿ.

ಮೂಡುಬಿದಿರೆ ಪೊಲೀಸ್ ಠಾಣೆಯ ವಾರೆಂಟ್ ಜಾರಿ ಕರ್ತವ್ಯದ ಹೆಡ್ ಕಾನ್‌ಸ್ಟೆಬಲ್ ರವೀಂದ್ರ, ಪೊಲೀಸ್ ಕಾನ್‌ಸ್ಟೆಬಲ್ ಲಿಂಗೇಶ್ ಹಾಗೂ ಕೋರ್ಟ್ ಪೊಲೀಸ್ ಕಾನ್‌ಸ್ಟೆಬಲ್ ರಮೇಶ್ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ನಂತರ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 15ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಆರೋಪಿಯ ವಿರುದ್ಧ ಕಾರ್ಕಳ ಗ್ರಾಮಾಂತರ, ಶಿರ್ವ, ಮುಲ್ಕಿ, ಬಸವನಹಳ್ಳಿ ಹಾಗೂ ಉಪ್ಪಿನಂಗಡಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

Leave a Reply

Your email address will not be published. Required fields are marked *

error: Content is protected !!