September 2, 2026

ಮಂಗಳೂರು: ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ ಎಂದು ನಂಬಿಸಿ 3 ಲಕ್ಷ  ವಂಚನೆ

0
image_editor_output_image1801959098-1788332134158

ಮಂಗಳೂರು: ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನ ಬಂದಿದೆ. ಅದನ್ನು ಪಡೆದುಕೊಳ್ಳಲು ತೆರಿಗೆ ಹಣ ಕಟ್ಟಬೇಕು ಎಂದು ನಂಬಿಸಿ ಅಪರಿಚಿತರು 3 ಲಕ್ಷದ 81 ಸಾವಿರ ರೂ.ಹಣ ವರ್ಗಾಯಿಸಲು ತಿಳಿಸಿ ವಂಚನೆ ಮಾಡಿರುವ ಬಗ್ಗೆ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

42 ವರ್ಷದ ದೂರುದಾರರಿಗೆ ಆ.14ರಂದು ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದೆ. ಕರೆ ಮಾಡಿದ ವ್ಯಕ್ತಿ ಕೇರಳ ಲಾಟರಿಯಲ್ಲಿ 8 ಲಕ್ಷ ರೂ. ಬಂದಿದೆ ಎಂದು ನಂಬಿಸಿ ಹಣವನ್ನು ಪಡೆಯಲು ತೆರಿಗೆ ಕಟ್ಟಬೇಕು ಎಂದು ತಿಳಿಸಿದ್ದಾನೆ. ಇದನ್ನು ನಂಬಿದ ದೂರುದಾರರು ಅಪರಿಚಿತ ವ್ಯಕ್ತಿ ಕಳುಹಿಸಿದ ಗೂಗಲ್ ಪೇ, ಫೋನ್ ಪೇ ಸ್ಕ್ಯಾನರ್ ಗಳಿಗೆ ಆ.15ರಿಂದ 26ರ ವರೆಗೆ ಹಂತ ಹಂತವಾಗಿ 3,81,300 ರೂ. ವರ್ಗಾಯಿಸಿದ್ದಾರೆ.

ಮತ್ತೆ ಕರೆ ಮಾಡಿದ ಅಪರಿಚಿತ ಲಾಟರಿ ಹಣ ಡಬಲ್ ಆಗಿದ್ದು, ಪುನಃ ಟ್ಯಾಕ್ಸ್ ಕಟ್ಟಬೇಕು ಎಂದು ಒತ್ತಾಯಿಸಿದ್ದಾನೆ. ಆಗ ದೂರುದಾರರಿಗೆ ಅದೊಂದು ಮೋಸದ ಜಾಲ ಎಂದು ಗೊತ್ತಾಗಿ ಸೈಬರ್ ಹೆಲ್ಪ್ ಲೈನ್ ಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!