September 2, 2026

ಸುಳ್ಯ: ಚಿರತೆ ಅನುಮಾನಾಸ್ಪದವಾಗಿ ಸಾವು

0
image_editor_output_image387041994-1788332348387

ಸುಳ್ಯ: ಆಲೆಟ್ಟಿ ಗ್ರಾಮದ ಗಡಿ ಪ್ರದೇಶವಾದ ಕಲ್ಲಪಳ್ಳಿಯಲ್ಲಿ ಚಿರತೆಯೊಂದು ಅನುಮಾನಾಸ್ಪದವಾಗಿ ಸಾವಿಗೀಡಾದ ಘಟನೆ ಮಂಗಳವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.

ಕಲ್ಲಪಳ್ಳಿ ಪ್ರದೇಶದ ಪೆರುಮುಂಡ ಗೋಪಾಲ ಗೌಡ ಎಂಬವರ ಜಾಗದಲ್ಲಿ ಚಿರತೆ ಸತ್ತು ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೇಟೆಯಾಡುವ ವೇಳೆ ಯಾವುದೋ ಪ್ರಾಣಿಯನ್ನು ಅಟ್ಟಾಡಿಸಿಕೊಂಡು ಬರುವಾಗ ಆಕಸ್ಮಿಕವಾಗಿ ಬಿದ್ದು ಚಿರತೆ ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಪಶುವೈದ್ಯರು ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಅರಣ್ಯ ಇಲಾಖೆ ಮುಂದಿನ ಕ್ರಮ ಕೈಗೊಂಡಿದೆ.

Leave a Reply

Your email address will not be published. Required fields are marked *

error: Content is protected !!